Job Description: ನವದೆಹಲಿ : ಭಾರತದಲ್ಲಿ ಸರಾಸರಿ ವಾರ್ಷಿಕ ಶೇ. 20 ರ ಪ್ರಮಾಣದಲ್ಲಿ ಅಂತರ್ಜಲ ಶೀಘ್ರವಾಗಿ ಕ್ಷೀಣಿಸುತ್ತಿರುವವುದನ್ನು ಮನಗಂಡು ಕೇಂದ್ರ ಸರ್ಕಾರವು ಅಂತರ್ಜಲ ಸಂಪನ್ಮೂಲಗಳ ನಿರ್ವಹಣೆಗಾಗಿ ಅಟಲ್ ಮಿಷನ್ ಯೋಜನೆ ಅಡಿ ಸುಮಾರು 6,000 ಕೋಟಿ ರೂ. ಬಿಡುಗಡೆಗೊಳಿಸಿದ್ದಾಗಿ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಲೋಕಸಭೆಗೆ ತಿಳಿಸಿದ್ದಾರೆ. ಭಾರತದ ರಾಜ್ಯಗಳಾದ ಗುಜರಾತ್, ಹರಿಯಾಣ, ಕರ್ನಾಟಕ, ಮಧ್ಯಪ್ರದೇಶ, ಮಹಾರಾಷ್ಟ್ರ, ರಾಜಸ್ಥಾನ ಮತ್ತು ಉತ್ತರ ಪ್ರದೇಶ ರಾಜ್ಯಗಳ ಒಟ್ಟು 78 ಜಿಲ್ಲೆಗಳಲ್ಲಿ ಸದ್ಯ ಅಟಲ್ ಜಲ ಮಿಷನ್ ಜಾರಿಗೊಳಿಸಲಾಗುತ್ತಿದೆ ಎಂದು ಸಚಿವರು ತಿಳಿಸಿದರು.