Job Description: ನವದೆಹಲಿ : ದೇಶದಲ್ಲಿರುವ ಒಟ್ಟು 03 ಡೀಮ್ಡ್ ಸಂಸ್ಕೃತ ವಿಶ್ವ ವಿದ್ಯಾಲಯಗಳನ್ನು ಕೇಂದ್ರೀಯ ವಿಶ್ವವಿದ್ಯಾಲಯಗಳಾಗಿ ಮೇಲ್ದರ್ಜೆಗೇರಿಸುವ "ಕೇಂದ್ರೀಯ ಸಂಸ್ಕೃತ ವಿವಿಗಳ ಮಸೂದೆ"ಯನ್ನು ಶುಕ್ರವಾರ ಸಂಸತ್ತು ಅಂಗೀಕರಿಸಿದೆ. ರಾಷ್ಟ್ರೀಯ ಸಂಸ್ಕೃತ ಸಂಸ್ಥಾನ, ಶ್ರೀ ಲಾಲಬಹಾದೂರ ಶಾಸ್ತ್ರಿ ರಾಷ್ಟ್ರೀಯ ಸಂಸ್ಕೃತ ವಿದ್ಯಾಪೀಠ ಮತ್ತು ರಾಷ್ಟ್ರೀಯ ಸಂಸ್ಕೃತ ವಿದ್ಯಾಪೀಠ ಈ ಮೂರು ಸಂಸ್ಕೃತ ವಿಶ್ವವಿದ್ಯಾಲಯಗಳನ್ನು ಇನ್ನು ಕೇಂದ್ರೀಯ ವಿಶ್ವವಿದ್ಯಾಲಯಗಳಾಗಿ ಮೇಲ್ದರ್ಜೆಗೇರಲಿವೆ.