Job Description: ಭೋಪಾಲ್ : ಮಧ್ಯಪ್ರದೇಶ ರಾಜಕೀಯ ಬಿಕ್ಕಟ್ಟಿನಿಂದಾಗಿ ಕಾಂಗ್ರೆಸ್ ನಾಯಕ ಕಮಲ ನಾಥ್ ಅವರು ಬಹುಮತ ಸಾಬೀತು ಪಡಿಸಲು ವಿಫಲರಾದ ಬೆನ್ನಲ್ಲೇ ಮಧ್ಯಪ್ರದೇಶ ಮುಖ್ಯಮಂತ್ರಿಯಾಗಿ BJP ಯ ಮಾಜಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಸೋಮವಾರ ಸಂಜೆ ಪ್ರಮಾಣವಚನ ಸ್ವೀಕರಿಸಿದರು. * ಶಿವರಾಜ್ ಸಿಂಗ್ ಚೌಹಾಣ್ ಅವರು ನಾಲ್ಕನೇ ಬಾರಿಗೆ ಮಧ್ಯಪ್ರದೇಶ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. * ಕಾಂಗ್ರೆಸ್ ನ 22 ಶಾಸಕರು ರಾಜೀನಾಮೆ ನೀಡಿ ಬಿಜೆಪಿಯನ್ನು ಸೇರುವ ಮೂಲಕ ಅವರೆಲ್ಲರೂ ಶಿವರಾಜ್ ಸಿಂಗ್ ಚೌಹಾಣ್ ಅವರು ಮುಖ್ಯಮಂತ್ರಿಯಾಗಲು ಬೆಂಬಲ ಸೂಚಿಸಿದ್ದಾರೆ.