Job Description: ದಿನಾಂಕ ಮಾರ್ಚ್ 25, 2020 ರಂದು ಪ್ರಧಾನಿ ನರೇಂದ್ರ ಮೋದಿಯವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಪಡಿತರ ಅಂಗಡಿಗಳ ಮೂಲಕ ಆಹಾರ ಧಾನ್ಯಗಳನ್ನು ಹೆಚ್ಚುವರಿ ಸರಬರಾಜು ಮಾಡಲು ಅಂಗೀಕರಿಸಲಾಯಿತು. ಕರೋನ ವೈರಸ್ ಭೀತಿಯಿಂದ ಇಡೀ ಭಾರತವೇ ಲಾಕ್-ಡೌನ್ ಆಗಿರುವದರಿಂದ ಸಾರ್ವಜನಿಕರಿಗೆ ತೊಂದರೆಯಾಗಬಾರದೆಂದು ಸಬ್ಸಿಡಿ ಮೂಲಕ ವಿತರಿಸುವ ಆಹಾರ ಧಾನ್ಯಗಳ ಪ್ರತಿ ತಿಂಗಳ ಕೋಟಾವನ್ನು 2 ಕೆಜಿ ಯಿಂದ 7 ಕೆಜಿವರೆಗೆ ಹೆಚ್ಚಿಸಲು ಕ್ರಮವನ್ನು ತೆಗೆದುಕೊಳ್ಳಲಾಗಿದೆ. * ಲಾಕ್ ಡೌನ್ ಸಮಯದಲ್ಲಿ ಪ್ರತಿ ವ್ಯಕ್ತಿಗೆ 7 ಕೆಜಿ ಆಹಾರ ಧಾನ್ಯಗಳನ್ನು ನೀಡಲು ಸರ್ಕಾರ ನಿರ್ಧರಿಸಿದೆ. * ದೇಶದ 80 ಕೋಟಿಗೂ ಹೆಚ್ಚು ಜನರಿಗೆ ಇದರ ಪ್ರಯೋಜನವಾಗಲಿದೆ. * ಭಾರತ ಸರ್ಕಾರದ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ಸಬ್ಸಿಡಿ ದರದಲ್ಲಿ ಆಹಾರ ಧಾನ್ಯಗಳನ್ನು ಒದಗಿಸುತ್ತಿದೆ.