Job Description: ನವದೆಹಲಿ : ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ರಷ್ಯಾ ಅಧ್ಯಕ್ಷರೊಂದಿಗೆ ಮಹಾಮಾರಿ ಕೊರೊನಾ ವೈರಸ್ ವಿರುದ್ಧ ಹೋರಾಡಲು ಜಂಟಿ ಮಾತುಕತೆ ನಡೆಸಿದರು. ಇಬ್ಬರು ಪ್ರಧಾನಿಗಳು ಬುಧವಾರ (25 ಮಾರ್ಚ್) ರಾತ್ರಿ ದೂರವಾಣಿ ಮೂಲಕ ಕೊರೊನಾ ವೈರಸ್ ನಿಯಂತ್ರಣ ಮತ್ತು ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಚರ್ಚಿಸಿದರು. ಜಗತ್ತಿನಾದ್ಯಂತ ವ್ಯಾಪಕವಾಗಿ ಹರಡುತ್ತಿರುವ ಕೊರೊನಾ ವೈರಸ್ ತಡೆಯಲು ಉಭಯ ರಾಷ್ಟ್ರಗಳು ಜಂಟಿಯಾಗಿ ಕೆಲಸ ನಿರ್ವಹಿಸಲು ಈ ಮೂಲಕ ಕೊರೊನಾಗೆ ಔಷಧ ಕಂಡುಕೊಳ್ಳಲು, ವೈಜ್ಞಾನಿಕ ಸಂಶೋಧನೆ ಹಾಗೂ ಮಾನವೀಯ ಕಾರ್ಯಗಳಿಗೆ ಒತ್ತು ನೀಡಲು ನಿರ್ಧರಿಸಿದರು.