Job Description: ನವದೆಹಲಿ: ಪ್ರಪಂಚದಾದ್ಯಂತ ಕೊರೋನಾ ವೈರಸ್ ವ್ಯಾಪಕವಾಗಿ ಹರಡುತ್ತಿದ್ದು, ಈ ಹಿನ್ನೆಲೆಯಲ್ಲಿ ಇಂದು ನಡೆಯಲಿರುವ ಜಿ -20 ರದ್ದುಪಡಿಸಿ ಕೇವಲ ವಿಡಿಯೋ ಕಾನ್ಫರೆನ್ಸ್ ಮೂಲಕ ಎಲ್ಲ ರಾಷ್ಟ್ರಗಳ ನಾಯಕರು ಚರ್ಚಿಸಲಿದ್ದಾರೆ. ಇದೆ ವೇಳೆ ಭಾರತದ ಪ್ರಧಾನಿ ಮೋದಿಯವರು ಶೃಂಗಸಭೆಯಲ್ಲಿ ಕೊರೊನಾ ವೈರಸ್ ರೋಗದ ಬಗ್ಗೆ ಚರ್ಚಿಸಲು ತಯಾರಾಗಿದ್ದೇನೆ ಎಂದು ತಿಳಿಸಿದ್ದಾರೆ. ಈ ಕುರಿತು ಟ್ವೀಟ್ ಮಾಹಿತಿ ನೀಡಿರುವ ಪ್ರಧಾನಿ ಮೋದಿ ಅವರು ಕೋವಿಡ್-19 ವೈರಸ್ ನಿಯಂತ್ರಿಸುವಲ್ಲಿ ಜಿ -20 ಶೃಂಗಸಭೆ ಪ್ರಮುಖ ಪಾತ್ರ ವಹಿಸಲಿದೆ ಎಂದು ತಿಳಿಸಿದ್ದಾರೆ. * ಸೌದಿ ಅರೇಬಿಯಾದ ರಾಜ ಸಲ್ಮಾನ್ ಅಧ್ಯಕ್ಷತೆಯಲ್ಲಿ G20 ಶೃಂಗಸಭೆ ನಡೆಯಲಿದೆ, ಈ ಶೃಂಗಸಭೆಯನ್ನು ವಿಶ್ವಸಂಸ್ಥೆ, ವಿಶ್ವ ಬ್ಯಾಂಕ್, ವಿಶ್ವ ಆರೋಗ್ಯ ಸಂಸ್ಥೆ, ವಿಶ್ವ ವ್ಯಾಪಾರ ಸಂಘಟನೆಯ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ.