Job Description: ಕರೋನ ವೈರಸ್ ನಿಯಂತ್ರಣಕ್ಕಾಗಿ ಭಾರತದಲ್ಲಿ ವಿಧಿಸಲಾಗಿರುವ 21 ದಿನಗಳ ಲಾಕ್-ಡೌನ್ ನಂತರ ದಿನಗಳಲ್ಲಿ ಸಾಮಾನ್ಯ ಸ್ಥಿತಿಯನ್ನು ದೇಶದಲ್ಲಿ ಪುನಃಸ್ಥಾಪಿಸಲು ಪ್ರಧಾನ ಮಂತ್ರಿ ಕಚೇರಿ ಉನ್ನತ ಮಟ್ಟದ ಸಮಿತಿಯನ್ನು ರಚಿಸಿದೆ. ಈ ಸಮಿತಿಯು ಆರೋಗ್ಯ ರಕ್ಷಣೆಯನ್ನು ಸುಧಾರಿಸಲು, ದೇಶದ ಆರ್ಥಿಕತೆಯನ್ನು ಮತ್ತೆ ಜಾರಿಗೆ ತರಲು ಉತ್ತಮ ಯೋಜನೆಗಳನ್ನು ರೂಪಿಸುವದು ಈ ಉನ್ನತ ಮಟ್ಟದ ಸಮಿತಿಯ ರಚನೆಯ ಮುಖ್ಯ ಉದ್ದೇಶವಾಗಿದೆ. * ಈ ಸಮಿತಿಯ ಅಧ್ಯಕ್ಷತೆಯನ್ನು ಪ್ರಧಾನಮಂತ್ರಿಯ ಪ್ರಧಾನ ಕಾರ್ಯದರ್ಶಿ ಪಿ ಕೆ ಮಿಶ್ರಾ ಅವರು ವಹಿಸಲಿದ್ದಾರೆ.