Job Description: ದಿನಾಂಕ ಏಪ್ರಿಲ್ 1, 2020 ರಿಂದ 10 ರಾಜ್ಯ ಬ್ಯಾಂಕುಗಳ ವಿಲೀನಗೊಳಿಸಿ 4 ದೊಡ್ಡ ಬ್ಯಾಂಕುಗಳಾಗಿ ಜಾರಿಗೊಳಿಸಲು ಯೋಜನೆಯನ್ನು ಭಾರತೀಯ ರಿಸರ್ವ್ ಬ್ಯಾಂಕ್ ಮುಂದಾಗಿದೆ. ವಿಲೀನ ಯೋಜನೆ * ಈ ಯೋಜನೆಯ ಪ್ರಕಾರ ಯುನೈಟೆಡ್ ಬ್ಯಾಂಕ್ ಆಫ್ ಇಂಡಿಯಾ ಮತ್ತು ಓರಿಯಂಟಲ್ ಬ್ಯಾಂಕ್ ಆಫ್ ಕಾಮರ್ಸ್ ಅನ್ನು ಪಂಜಾಬ್ ನ್ಯಾಷನಲ್ ಬ್ಯಾಂಕ್ ಜೊತೆ ವಿಲೀನಗೊಳಿಸಲಾಗುವುದು. * ಸಿಂಡಿಕೇಟ್ ಬ್ಯಾಂಕ್ ಅನ್ನು ಕೆನರಾ ಬ್ಯಾಂಕ್‌ನೊಂದಿಗೆ ವಿಲೀನಗೊಳಿಸಲಾಗುವದು. * ಅಲಹಾಬಾದ್ ಬ್ಯಾಂಕ್ ಅನ್ನು ಇಂಡಿಯನ್ ಬ್ಯಾಂಕ್‌ನೊಂದಿಗೆ ವಿಲೀನ. * ಆಂಧ್ರ ಬ್ಯಾಂಕ್ ಮತ್ತು ಕಾರ್ಪೊರೇಷನ್ ಬ್ಯಾಂಕ್ ಅನ್ನು ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದೊಂದಿಗೆ ವಿಲೀನಗೊಳಿಸಬೇಕಾಗಿದೆ.