Job Description: ಕೊರೋನವೈರಸ್ ಮಹಾಮಾರಿ ಸೃಷ್ಟಿಸಿರುವ ಆತಂಕಕ್ಕೆ ಸಂಬಂಧಿಸಿದ ವಿಷಯಗಳನ್ನು ಚರ್ಚಿಸುವ ಸಲುವಾಗಿ ಪ್ರಧಾನಿ ನರೇಂದ್ರ ಮೋದಿಯವರು ಗುರುವಾರ (ಏಪ್ರಿಲ್ 02) ರಂದು ದೇಶದ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ನವದೆಹಲಿಯಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದರು. * ವಿಡಿಯೋ ಕಾನ್ಫರೆನ್ಸ್ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಮುಖ್ಯಮಂತ್ರಿಗಳು ಸೋಂಕಿತರ ಸಂಪರ್ಕಗಳನ್ನು ಪತ್ತೆ ಹಚ್ಚುವ ಮತ್ತು ಶಂಕಿತರನ್ನು ಕ್ವಾರಂಟೈನ್ ಸೌಲಭ್ಯಕ್ಕೆ ಕಳುಹಿಸುವ ಬಗೆಗೆ ಚರ್ಚೆ ನಡೆಸಿದರು. * ಕೊರೋನವೈರಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇದು ಪ್ರಧಾನಿ ನರೇಂದ್ರ ಮೋದಿಯವರು ಮುಖ್ಯಮಂತ್ರಿಗಳೊಂದಿಗೆ ನಡೆಸುತ್ತಿರುವ ಎರಡನೇ ವಿಡಿಯೋ ಕಾನ್ಫರೆನ್ಸ್ ಆಗಿದೆ.