Job Description: ನವದೆಹಲಿ: ಭಾರತದ ಪ್ರಧಾನಿ ಮೋದಿಯವರು ಕೊರೋನಾ ವಿರುದ್ಧದ ಹೋರಾಟಕ್ಕೆ ಒಗ್ಗಟ್ಟು ಪ್ರದರ್ಶಿಸಿಸಲು ದಿನಾಂಕ ಏಪ್ರಿಲ್ 5(ಭಾನುವಾರ) ರಂದು ರಾತ್ರಿ 9 ಗಂಟೆಗೆ ಮನೆಯ ವಿದ್ಯುತ್ ದೀಪಗಳನ್ನು ಆರಿಸಿ, ಮನೆಗಳ ಮಹಡಿಗಳಲ್ಲಿ ನಿಂತು ಮೇಣದ ಬತ್ತಿ, ದೀಪ, ಮೊಬೈಲ್ ಟಾರ್ಚ್ ಗಳನ್ನು ಹಿಡಿದು 9 ನಿಮಿಷಗಳ ಕಾಲ ಬೆಳಕು ಚೆಲ್ಲಲು ದೇಶದ ಜನತೆಗೆ ಮೋದಿ ಕರೆ ನೀಡಿದ್ದಾರೆ. ಇಂದು (3 ಏಪ್ರಿಲ್) ಬೆಳಿಗ್ಗೆ 9 ಗಂಟೆಗೆ ಟ್ವಿಟ್ಟರ್ ನಲ್ಲಿ ವಿಡಿಯೋ ಸಂದೇಶ ಹಂಚಿಕೊಂಡು ದೀಪ ಬೆಳಗುವ ಮೂಲಕ ನಮ್ಮ ಮನದಲ್ಲಿ ನಾವು ಒಂಟಿಯಲ್ಲ ಎಂಬ ಸಂಕಲ್ಪ ಮಾಡಿ ಕರೋನ ವಿರುದ್ದದ ಹೋರಾಟಕ್ಕೆ ಸಹಕರಿಸಿ ಎಂದು ಕರೆ ನೀಡಿದ್ದಾರೆ.