Job Description: ಬೆಂಗಳೂರು : ಮಹಾಮಾರಿ ಕೋವಿಡ್-19 ವೈರಸ್ ನಿರ್ವಹಣೆಗೆ ಸಂಬಂಧಿಸಿದಂತೆ ಮಾಧ್ಯಮಗಳಿಗೆ ಮಾಹಿತಿ ನೀಡುವ ಸಲುವಾಗಿ ಕರ್ನಾಟಕ ರಾಜ್ಯ ಸರ್ಕಾರದ ವಕ್ತಾರರಾಗಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್‌ಕುಮಾರ್ ಅವರು ಆಯ್ಕೆಯಾಗಿದ್ದಾರೆ. ರಾಜ್ಯದ ಮುಖ್ಯಮಂತ್ರಿ B S ಯಡಿಯೂರಪ್ಪ ಅವರ ಸೂಚನೆ ಮೇರೆಗೆ ಈ ಹೊಸ ಜವಾಬ್ದಾರಿಯನ್ನು ಸುರೇಶ್‌ಕುಮಾರ್ ವಹಿಸಿಕೊಂಡಿದ್ದಾರೆ. * ಈ ಮೊದಲು ಆರೋಗ್ಯ ಸಚಿವ ಬಿ. ಶ್ರೀರಾಮುಲು ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರು ಪ್ರತ್ಯೇಕವಾಗಿ ಮಾಧ್ಯಮಗಳಿಗೆ ಮಾಹಿತಿಗಳನ್ನು ನೀಡುತ್ತಿದ್ದರು.