Job Description: ದಿನಾಂಕ ಏಪ್ರಿಲ್ 15, 2020 ರಂದು ಭಾರತ ಸರ್ಕಾರವು ಎರಡನೇ ಹಂತದ ಲಾಕ್ ಡೌನ್ ಮಾರ್ಗಸೂಚಿಗಳನ್ನು ಬಿಡುಗಡೆಗೊಳಿಸಿದೆ. ಹೊಸ ಮಾರ್ಗಸೂಚಿಗಳ ಪ್ರಕಾರ, ಗ್ರಾಮೀಣ ಪ್ರದೇಶದಲ್ಲಿ ಕೈಗಾರಿಕಾ ಕಾರ್ಯಗಳು, ರಸ್ತೆ ನಿರ್ಮಾಣ ಕಾರ್ಯಗಳು ಮತ್ತು MGNREGA ಯೋಜನೆಯ ಕಾರ್ಯಗಳನ್ನು ಪ್ರಾರಂಭಿಸಲು ಸರ್ಕಾರ ಅವಕಾಶ ನೀಡಿದೆ. * MGNREGA (ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ) ದೇಶದ ಉದ್ಯೋಗ ಸೃಷ್ಟಿಯ ದೊಡ್ಡ ಮೂಲವಾಗಿದೆ. * ವಾರ್ಷಿಕವಾಗಿ 50 ರಿಂದ 60 ದಶಲಕ್ಷಕ್ಕೂ ಹೆಚ್ಚು ಕುಟುಂಬಗಳಿಗೆ ಕೆಲಸವನ್ನು ಒದಗಿಸುತ್ತದೆ. * ಸರಿ ಸುಮಾರು 5 ಲಕ್ಷದಿಂದ 6 ಲಕ್ಷ ವಲಸಿಗರು ಲೊಕ್ಡೌನ್ ನಿಂದಾಗಿ ದೇಶಾದ್ಯಂತ ತಮ್ಮ ಹಳ್ಳಿಗಳಿಗೆ ಮರಳಿದ್ದಾರೆ ಎಂದು ಕೇಂದ್ರ ಸರ್ಕಾರ ಅಂದಾಜಿಸಿದೆ. ಇದರಿಂದ ಗ್ರಾಮೀಣ ಭಾಗದಲ್ಲಿ ನರೇಗಾ ಕಾರ್ಯವನ್ನು ಸರ್ಕಾರ ಆರಂಭಿಸಿದೆ.