Job Description: ಬೆಳಗಾವಿ: ಕಲಬುರಗಿ ಮೂಲದ ಖ್ಯಾತ ಕಾದಂಬರಿಕಾರ ಚಂದ್ರಕಾಂತ ಕುಸನೂರ ಅವರು ತಮ್ಮ 90 ನೇ ವಯಸ್ಸಿನಲ್ಲಿ ಶನಿವಾರ (19 ಏಪ್ರಿಲ್ 2020) ರ ರಾತ್ರಿ ವಯೋಸಹಜ ಕಾಯಿಲೆಯಿಂದ ಬೆಳಗಾವಿಯಲ್ಲಿ ನಿಧನರಾದರು. * ಚಂದ್ರಕಾಂತ ಕುಸನೂರ ಅವರು ಕನ್ನಡದ ಖ್ಯಾತ ಸಾಹಿತಿ ಹಾಗು ರಂಗಕರ್ಮಿಯಾಗಿದ್ದರು. * 1931ರಲ್ಲಿ ಕಲಬುರ್ಗಿಯ ಕುಸನೂರಲ್ಲಿ ಜನನ * ಕಲಬುರಗಿಯಲ್ಲಿ "ರಂಗ ಮಾಧ್ಯಮ" ಎಂಬ ನಾಟಕ ಸಂಸ್ಥೆಯ ಸ್ಥಾಪಕರಾಗಿದ್ದು * 1975ರಲ್ಲಿ 'ಯಾತನಾ ಶಿಬಿರ' ಕಾದಂಬರಿಗೆ ರಾಜ್ಯ ಸಾಹಿತ್ಯ ಅಕಾಡಮಿಯ ಪುರಸ್ಕಾರ ಲಭಿಸಿದೆ. * 1992ರಲ್ಲಿ ಕರ್ನಾಟಕ ನಾಟಕ ಅಕಾಡಮಿ ಗೌರವ ಪ್ರಶಸ್ತಿ ನೀಡಲಾಗಿದೆ ಮತ್ತು 2006 ನೇ ಸಾಲಿನಲ್ಲಿ ನಾಡೋಜ ಪ್ರತಿಷ್ಠಾನದ ಅರವಿಂದ ಪ್ರಶಸ್ತಿ ದೊರೆತಿದೆ.