Job Description: ದೇಶದಲ್ಲಿ ಇಂದು ವಿಶ್ವಗುರು ಬಸವಣ್ಣವರ 877 ನೇ ಜಯಂತಿಯನ್ನು ಆಚರಿಸಲಾಗುತ್ತಿದೆ. ಹನ್ನೆರಡನೇ ಶತಮಾನದಲ್ಲಿಯೇ ಕ್ರಾಂತಿಕಾರಿ ಸಾಮಾಜಿಕ ಚಳವಳಿಯನ್ನು ಸಂಘಟಿಸಿದ್ದ ಬಸವಣ್ಣನವರು ಜಗತ್ತು ಕಂಡ ದಾರ್ಶನಿಕರಲ್ಲಿ ಪ್ರಮುಖರಾಗಿದ್ದಾರೆ. ಮೂಢನಂಬಿಕೆ, ಅಸ್ಪೃಶ್ಯತೆ ಸೇರಿ ಮುಂತಾದ ಪಿಡುಗುಗಳ ನಿರ್ಮೂಲನೆಗಾಗಿ ಬದುಕಿನುದ್ದಕ್ಕೂ ಹೋರಾಡಿದ ಅವರು ತಮ್ಮ ವಚನಗಳ ಮೂಲಕ ಕಾಯಕ, ಸಮಾನತೆಯ ಮಹತ್ವವನ್ನು ಮನುಕುಲಕ್ಕೆ ಸಾರಿದ್ದಾರೆ.