Job Description: ಬೆಂಗಳೂರು: ಕೊವಿಡ್ ಹಿನ್ನೆಲೆಯಲ್ಲಿ ದೇಶದಲ್ಲಿ ಲಾಕ್ ಡೌನ್ ವಿಧಿಸಿರುವ ಹಿನ್ನಲೆ ಐಟಿ ಉದ್ಯೋಗಿಗಳಿಗೆ ಬರುವ ಜುಲೈ ತಿಂಗಳ 31 ನೇ ತಾರೀಕಿನವರೆಗೆ ಮನೆಯಿಂದಲೇ ಕೆಲಸ (ವರ್ಕ್ ಫ್ರಮ್ ಹೋಂ) ಮಾಡಲು ಕೇಂದ್ರ ಸರ್ಕಾರ ಅನುಮತಿ ನೀಡಿ ಆದೇಶ ಹೊರಡಿಸಿದೆ. ಕೇಂದ್ರ ಐಟಿ ಮತ್ತು ದೂರಸಂಪರ್ಕ ಖಾತೆ ಸಚಿವ ರವಿ ಶಂಕರ್ ಪ್ರಸಾದ್ ಅವರು ಎಲ್ಲ ರಾಜ್ಯಗಳ ಮಾಹಿತಿ ತಂತ್ರಜ್ಞಾನ ಸಚಿವರ ಜತೆ ವೀಡಿಯೋ ಕಾನ್ಫರನ್ಸ್ ನಲ್ಲಿ ಸಭೆ ನಡೆಸಿ ಬಳಿಕ ಈ ವಿಷಯ ಪ್ರಕಟಿಸಿದರು.