Job Description: ಬೆಂಗಳೂರು: ನಿತ್ಯೋತ್ಸವ ಕವಿ ನಿಸಾರ್ ಅಹಮದ್ ತಮ್ಮ 84 ವಯಸ್ಸಿನಲ್ಲಿ ಬೆಂಗಳೂರಿನ ತಮ್ಮ ಸ್ವಗೃಹದಲ್ಲಿ ಭಾನುವಾರ ನಿಧನರಾದರು. * ನಿತ್ಯೋತ್ಸವ ಕವಿ : 'ಜೋಗದ ಸಿರಿ ಬೆಳಕಿನಲ್ಲಿ...' ನಿಸಾರ್ ಅಹಮದ್ ಅವರ ಜನಪ್ರಿಯ ಕೃತಿಯಾದುದರಿಂದ ಇವರು ನಿತ್ಯೋತ್ಸವ ಕವಿ ಜನಮನದಲ್ಲಿ ಗುರುತಿಸಿಕೊಂಡಿದ್ದಾರೆ. * ಪ್ರೊ.ಕೆ.ಎಸ್.ನಿಸಾರ್ ಅಹಮದ್ ಅವರ ಪೂರ್ಣ ಹೆಸರು ಕೊಕ್ಕರೆ ಹೊಸಳ್ಳಿ ಶೇಖ್ ಹೈದರ ನಿಸಾರ್ ಅಹಮದ್. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿಯಲ್ಲಿ ಫೆಬ್ರುವರಿ 5, 1936ರಲ್ಲಿ ಜನಿಸಿದರು. * ಶ್ರೀಯುತರ 21 ಕವನ ಸಂಕಲನಗಳು, 14 ವೈಚಾರಿಕ ಕೃತಿಗಳು, 5 ಮಕ್ಕಳ ಸಾಹಿತ್ಯ ಕೃತಿಗಳು, 5 ಅನುವಾದ ಕೃತಿಗಳು, 13 ಸಂಪಾದನಾ ಗ್ರಂಥಗಳು ಪ್ರಕಟವಾಗಿವೆ. * ಅವುಗಳಲ್ಲಿ ಮನಸು ಗಾಂಧಿಬಜಾರು, ನಿತ್ಯೋತ್ಸವ ಹಾಗೂ ಕುರಿಗಳು ಸಾರ್ ಕುರಿಗಳು ಪ್ರಸಿದ್ಧವಾಗಿವೆ. * ಪ್ರಶಸ್ತಿ, ಗೌರವಗಳು : 2006ರ ಮಾಸ್ತಿ ಪ್ರಶಸ್ತಿ, ಅನಕೃ ಪ್ರಶಸ್ತಿ, ಕೆಂಪೇಗೌಡ ಪ್ರಶಸ್ತಿ, ಪಂಪ ಪ್ರಶಸ್ತಿ, ರಾಜ್ಯೋತ್ಸವ ಪ್ರಶಸ್ತಿ (1981), ನಾಡೋಜ ಪ್ರಶಸ್ತಿ (2003) ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ಗೊರೂರು ಪ್ರಶಸ್ತಿ, ಅರಸು ಪ್ರಶಸ್ತಿ (2006) ಶಿವಮೊಗ್ಗದಲ್ಲಿ ನಡೆದ 73ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು.