Job Description: ಪ್ರತೀ ವರ್ಷದ ಮೇ ತಿಂಗಳ ಮೊದಲನೇ ಮಂಗಳವಾರದಂದು ವಿಶ್ವ ಅಸ್ತಮಾ ದಿನ ವಿಶ್ವದಾದ್ಯಂತ ಆಚರಿಸಲಾಗುತ್ತಿದೆ. ಈ ಆಚರಣೆಯ ಹಿಂದಿನ ಮುಖ್ಯ ಉದ್ದೇಶ ವಿಶ್ವಾದ್ಯಂತ ಅಸ್ತಮಾರೋಗದ ಬಗೆಗಿನ ಅಪನಂಬಿಕೆಗಳನ್ನು ಹೋಗಲಾಡಿಸುವದು ಮತ್ತು ರೋಗದ ಬಗ್ಗೆ ಜಾಗೃತಿ ಮೂಡಿಸಿ, ರೋಗಿಗಳಿಗೆ ಆತ್ಮಸೈರ್ಯವನ್ನು ನೀಡುವದಾಗಿದೆ. * 1998ರಲ್ಲಿ ಮೊದಲ ಬಾರಿಗೆ ವಿಶ್ವ ಅಸ್ತಮಾ ದಿನಾಚರಣೆಯನ್ನು ಪ್ರತೀ ವರ್ಷ ನಡೆಸಲಾಗುತ್ತದೆ. * ಬಾರ್ಸಿಲೋನಾದಲ್ಲಿ ನಡೆದ ಮೊದಲ ವಿಶ್ವ ಅಸ್ತಮಾ ಸಮಾವೇಶದ ಸವಿ ನೆನಪಿನಲ್ಲಿ ಈ ದಿನವನ್ನು ಆಚರಿಸಲಾಗುತ್ತದೆ.