Job Description: ಭಾರತ ಸರ್ಕಾರದ ಕೇಂದ್ರ ಮಾನವ ಸಂಪನ್ಮೂಲ ಮತ್ತು ಅಭಿವೃದ್ಧಿ ಸಚಿವಾಲಯವು ಇತ್ತೀಚೆಗೆ ಪ್ರಧಾನಿ ಸಂಶೋಧನಾ ಫೆಲೋಶಿಪ್ ಯೋಜನೆಗೆ ವಿವಿಧ ತಿದ್ದುಪಡಿಗಳನ್ನು ಮಾಡಿ ಘೋಷಿಸಿದೆ. ಕೇಂದ್ರ ಸರ್ಕಾರದ ಈ ಯೋಜನೆಯು, ಸಂಶೋಧನೆಗಳನ್ನು ಉತ್ತೇಜಿಸಲು ಸಹಕಾರಿಯಾಗಿದೆ. ಅಲ್ಲದೆ, “ಸಂಶೋಧನೆ ಮತ್ತು ಇನ್ನೋವೇಶನ್ ವಿಭಾಗ” ಎಂಬ ಪ್ರತ್ಯೇಕವಾದ ವಿಭಾಗವನ್ನು ಆರಂಭಿಸಿದೆ. ನೂತನ ತಿದ್ದುಪಡಿಯ ಅನ್ವಯ 2020-21 ನೇ ಸಾಲಿನಲ್ಲಿ ಕೇಂದ್ರ ಸಂಸ್ಥೆಗಳನ್ನು ಹೊರತುಪಡಿಸಿ (IISC, NIT, IIT, IIIT) ಇತರೆ ಯಾವುದೇ ಸಂಸ್ಥೆಗಳ ವಿದ್ಯಾರ್ಥಿಗಳಿಗೆ ಗೇಟ್ ಪರೀಕ್ಷೆಯ ಅಂಕಗಳು ಕಡ್ಡಾಯವಾಗಿರುತ್ತವೆ. * PMRAF ಯೋಜನೆ: ದೇಶದ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿನ ಸಂಶೋಧನೆಯ ಗುಣಮಟ್ಟವನ್ನು ಸುಧಾರಿಸಲು ಈ ಯೋಜನೆಯನ್ನು ರೂಪಿಸಲಾಗಿದೆ. ಅಲ್ಲದೆ, ಸಂಶೋಧನೆಯಲ್ಲಿನ ಉತ್ತಮ ಪ್ರತಿಭೆಗಳನ್ನು ಆಕರ್ಷಿಸುವುದು ಯೋಜನೆಯ ಮುಖ್ಯ ಉದ್ದೇಶವಾಗಿದೆ.