Job Description: ಬೆಂಗಳೂರು : APMC ಕಾಯ್ದೆಗೆ ತಿದ್ದುಪಡಿ ತರಲು ರಾಜ್ಯ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಈ ಮೂಲಕ ಸ್ಥಳೀಯ ಮಾರುಕಟ್ಟೆ ಸಮಿತಿಗಳ ಅಧಿಕಾರ ಕಡಿತಗೊಳಿಸಿ, ಖಾಸಗಿ ಕೃಷಿ ಉತ್ಪನ್ನ ಮಾರುಕಟ್ಟೆಗಳ ಸ್ಥಾಪನೆ ಮತ್ತು ಖಾಸಗಿ ಕಂಪೆನಿಗಳ ಪ್ರವೇಶಕ್ಕೆ ಅವಕಾಶ ಕಲ್ಪಿಸುವದು ಈ ತಿದ್ದುಪಡಿಯ ಉದ್ದೇಶವಾಗಿದೆ. ಭಾರತ ಸರಕಾರದ 2017 ಮಾದರಿ ಕೃಷಿ ಉತ್ಪನ್ನ ಮತ್ತು ಜೀವನೋಪಾಯ ಮಾರುಕಟ್ಟೆ ಕಾಯ್ದೆಯ ಅಡಿಯಲ್ಲಿ ಕರ್ನಾಟಕ ಕೃಷಿ ಉತ್ಪನ್ನ ಮಾರುಕಟ್ಟೆ (ನಿಯಂ ತ್ರಣ ಮತ್ತು ಅಭಿವೃದ್ಧಿ) (ತಿದ್ದುಪಡಿ) ಅಧ್ಯಾದೇಶ 2020ಕ್ಕೆ ರಾಜ್ಯ ಸಚಿವ ಸಂಪುಟ 14 ಮೇ (ಗುರುವಾರ) ರಂದು ಅನುಮೋದನೆ ನೀಡಿದೆ. * ಏನೇನು ತಿದ್ದುಪಡಿ? : ನೂತನ ತಿದ್ದುಪಡಿಯಲ್ಲಿ ಸಮಿತಿಯ ಅಧಿಕಾರ ಕೇವಲ ಮಾರುಕಟ್ಟೆ ಒಳಗೆ ಮಾತ್ರ. ಆದರೆ ರಾಜ್ಯ ಮಟ್ಟದ ನಿರ್ದೇಶಕ ಮಂಡಳಿಗೆ ಪೂರ್ಣ ಪ್ರಮಾಣದ ಅಧಿಕಾರ ಇರುತ್ತದೆ. ಇದು ಎಲ್ಲವನ್ನೂ ನಿಯಂತ್ರಣ ಮಾಡಬಹುದಾಗಿದೆ. * ಖಾಸಗಿ ಮಾರುಕಟ್ಟೆಗಳ ಸ್ಥಾಪನೆ ಮತ್ತು ಖಾಸಗಿ ಸಂಸ್ಥೆಗಳ ಪ್ರವೇಶಕ್ಕೆ ತಿದ್ದುಪಡಿ ಅವಕಾಶ ಕಲ್ಪಿಸಿದೆ.