Job Description: ಮಂಗಳೂರು: ಕರ್ನಾಟಕದೊಂದಿಗೆ ಗಡಿ ಹಂಚಿಕೊಂಡಿರುವ ಕೇರಳದ ಕಾಸರಗೋಡು ಜಿಲ್ಲೆಯ ಮಂಜೇಶ್ವರ ತಾಲ್ಲೂಕು ಪ್ರದೇಶವನ್ನು 'ಕನ್ನಡ ಭಾಷೆಯ ಅಲ್ಪಸಂಖ್ಯಾತ ಪ್ರದೇಶ' ಎಂಬುದಾಗಿ ಕೇರಳ ಸರ್ಕಾರ ಘೋಷಣೆ ಮಾಡಿದೆ. ಈ ಮೂಲಕ ಈ ಭಾಗದ ಕೆಲ ಸರ್ಕಾರಿ ಸೌಲಭ್ಯಗಳಿಂದ ವಂಚಿತರಾಗಿದ್ದ ಕನ್ನಡಿಗರ ಬಹುದಿನದ ಬೇಡಿಕೆ ಈಡೇರಿದಂತಾಗಿದೆ. ಈ ಮೂಲಕ ಮಂಜೇಶ್ವರ ತಾಲ್ಲೂಕಿಗೆ ಕನ್ನಡ ಭಾಷೆಯ ಅಲ್ಪಸಂಖ್ಯಾತ ಪ್ರದೇಶ ಸ್ಥಾನಮಾನವನ್ನು ನೀಡಿ ಕೇರಳ ಸರ್ಕಾರ ಆದೇಶ ಹೊರಡಿಸಿದೆ.