Job Description: ಬೆಂಗಳೂರು: ಪ್ರತಿಷ್ಠಿತ ಬೆಂಗಳೂರು ಟೆಕ್ ಸಮಿಟ್ (BTS) ಅನ್ನು ಸೆಪ್ಟೆಂಬರ್ 21 ರಿಂದ 23ರವರೆಗೆ ನಡೆಸಲು ತೀರ್ಮಾನಿಸಲಾಗಿತ್ತಾದರೂ ಕೋರೋಣ ವೈರಸ್ ಭೀತಿಯಿಂದಾಗಿ ಈ ಸಮಿಟ್'ನ್ನು ಬರುವ ನವೆಂಬರ್ 19ರಿಂದ 21ರವರೆಗೆ ನಡೆಸಲು ರಾಜ್ಯ ಸರ್ಕಾರ ತೀರ್ಮಾನಿಸಿರುವದಾಗಿ ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ತಿಳಿಸಿದರು. ಈ ಬಾರಿಯ ಟೆಕ್ ಸಮಿಟ್ ಹಲವು ವಿಶೇಷಗಳಿಂದ ಕೂಡಿರಲಿದ್ದು, ಹಲವು ಅರೋಗ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗುವದು. ಜೊತೆಗೆ ಕೋವಿಡ್ ಸಂದರ್ಭದಲ್ಲಿ ಜನರು ಎದುರಿಸುವ ಸಮಸ್ಯೆಗಳಿಗೆ ತಂತ್ರಜ್ಞಾನ ಹೇಗೆ ಸಹಕಾರಿಯಾಗಲಿದೆ ಮತ್ತು ಹೊಸ ಹೊಸ ತಂತ್ರಜ್ಞಾನಗಳ ಬಗ್ಗೆಯೂ ತಜ್ಞರು ಉಪನ್ಯಾಸ ಈ ಕಾರ್ಯಕ್ರಮದಲ್ಲಿ ನಡೆಯಲಿದೆ.