Job Description: ಕೋಲ್ಕತಾ : ಭಾರತದ ಪೂರ್ವ ಕರಾವಳಿ ತೀರಕ್ಕೆ ಅಪ್ಪಳಿಸಿರುವ ಅಂಪನ್ ಚಂಡಮಾರುತದಿಂದ ಒಡಿಸ್ಸಾ, ಪಶ್ಚಿಮ ಬಂಗಾಳ ಸೇರಿ ಹಲವು ರಾಜ್ಯಗಳು ಸಂಕಷ್ಟ ಎದುರುಸುತ್ತಿವೆ. ಈ ನಡುವೆ ಪ್ರಧಾನಿ ನರೇಂದ್ರ ಮೋದಿಯವರು ಪಶ್ಚಿಮ ಬಂಗಾಲ ರಾಜ್ಯಕ್ಕೆ ಭೇಟಿ ನೀಡಿ ಚಂಡಮಾರುತದಿಂದ ಹಾನಿಯಾದ ಪ್ರದೇಶಗಳ ವೈಮಾನಿಕ ಸಮೀಕ್ಷೆ ನಡೆಸಿದರು. ಬಳಿಕ ಪ್ರಧಾನಿಗಳು ಪಶ್ಚಿಮ ಬಂಗಾಳಕ್ಕೆ 1,000 ಕೋಟಿ ರೂಪಾಯಿಯನ್ನು ತತ್ಕ್ಷಣದ ಆರಂಭಿಕ ಪರಿಹಾರವಾಗಿ ಘೋಷಿಸಿದರು. ಅಲ್ಲದೆ ಮುಂದಿನ ದಿನಗಳಲ್ಲಿ ಇನ್ನಷ್ಟು ಸಹಾಯ ನೀಡುವುದಾಗಿ ತಿಳಿಸಿದರು. ಜೊತೆಗೆ ಚಂಡಮಾರುತದಿಂದ ಮೃತಪಟ್ಟವರ ಕುಟುಂಬಗಳಿಗೆ 2 ಲಕ್ಷ ರೂಪಾಯಿ ಹಾಗೂ ಗಾಯಗೊಂಡವರಿಗೆ 50,000 ರೂ ಪರಿಹಾರ ನೀಡುವುದಾಗಿ ಪ್ರಧಾನಿ ತಿಳಿಸಿದರು.