Job Description: ಭಾರತೀಯ ಮಹಿಳಾ ಹಾಕಿ ತಂಡದ ನಾಯಕಿ ರಾಣಿ ರಾಂಪಾಲ್ ಅವರ ಹೆಸರನ್ನು ಅತ್ಯುನ್ನತ ಕ್ರೀಡಾ ಪುರಸ್ಕಾರವಾದ ಖೇಲ್‌ರತ್ನ ಪುರಸ್ಕಾರಕ್ಕೆ ಹಾಕಿ ಇಂಡಿಯಾ ಶಿಫಾರಸು ಮಾಡಿದೆ. ರಾಣಿ ರಾಂಪಾಲ್ ನಾಯಕತ್ವದಲ್ಲಿ ಭಾರತ ಮಹಿಳಾ ಹಾಕಿ ತಂಡ 2017ರಲ್ಲಿ ಏಷ್ಯಾ ಕಪ್, 2018ರಲ್ಲಿ ಏಷ್ಯನ್ ಗೇಮ್ಸ್ ನಲ್ಲಿ ಚಿನ್ನದ ಪದಕವನ್ನು ತನ್ನದಾಗಿಸಿಕೊಂಡಿದೆ. ಅಲ್ಲದೆ ರಾಣಿ ನಾಯಕತ್ವದಲ್ಲಿ ಭಾರತ ತಂಡ 2016 ಮತ್ತು 2020ರ ಒಲಿಂಪಿಕ್ಸ್ ಕ್ರೀಡಾಕೂಟಗಳಿಗೆ ಅರ್ಹತೆ ಪಡೆಯುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಇದಲ್ಲದೆ ರಾಣಿ ಅವರು ವಿಶ್ವ ಗೇಮ್ಸ್ ವರ್ಷದ ಅಥ್ಲೀಟ್ ಪ್ರಶಸ್ತಿ ಹಾಗೂ 2016ರಲ್ಲಿ ಅರ್ಜುನ ಮತ್ತು 2020ರಲ್ಲಿ ಪದ್ಮಶ್ರೀ ಪ್ರಶಸ್ತಿ ಪಡೆದಿರುತ್ತಾರೆ.