Job Description: ನೈಋತ್ಯ ರೈಲ್ವೆಯಾ ಕೇಂದ್ರ ಹುಬ್ಬಳ್ಳಿ ನಗರದಲ್ಲಿ ವಿಶ್ವದಲ್ಲೇ ಅತಿ ಉದ್ದದ ಪ್ಲಾಟ್ ಫಾರ್ಮ್ ನಿರ್ಮಾಣವಾಗಲಿದೆ. ಪ್ರಸ್ತುತ ಈಗಿರುವ ಒಂದನೇ ಪ್ಲಾಟ್ ಫಾರ್ಮ್ 550 ಮೀಟರ್ ಉದ್ದವಿದ್ದು, ಇದನ್ನು 1,400 ಮೀ.ಗೆ ಹೆಚ್ಚಿಸಲಾಗುವುದೆಂದು ನೈರುತ್ಯ ರೈಲ್ವೆಯ ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿ ಇ. ವಿಜಯಾ ತಿಳಿಸಿದ್ದಾರೆ. * ಒಟ್ಟು ₹90 ಕೋಟಿ ವೆಚ್ಚದಲ್ಲಿ ಕೆಲಸ ಆರಂಭಿಸಲಾಗಿದ್ದು, 2021ರ ಜೂನ್ ವೇಳೆಗೆ ಕಾಮಗಾರಿ ಪೂರ್ಣಗೊಳ್ಳುವ ನಿರೀಕ್ಷೆಯಿದೆ. * ಒಂದು ವೇಳೆ ಈ ಪ್ಲಾಟ್ ಫಾರಂ ನಿರ್ಮಾಣಗೊಂಡಿದ್ದೆ ಆದಲ್ಲಿ ಇದು ವಿಶ್ವದಲ್ಲಿಯೇ ಅತಿ ಉದ್ದನೆಯ ರೈಲ್ವೆ ಪ್ಲಾಟ್ ಫಾರಂ ಆಗಲಿದೆ. * ಉತ್ತರ ಪ್ರದೇಶದ ಗೋರಖ್‌ಪುರದಲ್ಲಿ 1,366 ಮೀ. ಉದ್ದದ ಪ್ಲಾಟ್‌ಫಾರ್ಮ್ ಇದ್ದು, ಇದು ಸದ್ಯಕ್ಕೆ ವಿಶ್ವದ ಅತಿ ಉದ್ದದ ಪ್ಲಾಟ್‌ಫಾರ್ಮ್ ಎನ್ನುವ ಹೆಗ್ಗಳಿಕೆ ಹೊಂದಿದೆ.