Job Description: ಬೆಂಗಳೂರು : ಕೇಂದ್ರ ಗೃಹ ಸಚಿವಾಲಯ ಹಾಗೂ ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯದ ನಿರ್ದೇಶನದಂತೆ ರಾಜ್ಯದಲ್ಲಿ ದಲಿತ ಎನ್ನುವ ಪದವನ್ನು ಬಳಸದಂತೆ ರಾಜ್ಯದ ಸಮಾಜ ಕಲ್ಯಾಣ ಇಲಾಖೆ ಆದೇಶ ಹೊಡಸಿದೆ. ರಾಜ್ಯದ ಉಪ ಮುಖ್ಯಮಂತ್ರಿ ಗೋವಿಂದ ಎಂ ಕಾರಜೋಳ ಅವರು ಈ ಕುರಿತು ಮಾಹಿತಿ ನೀಡಿದ್ದು, ರಾಜ್ಯದಲ್ಲಿ ಆಡಳಿತ ಭಾಷೆ, ಪತ್ರ ವ್ಯವಹಾರ, ಪ್ರಮಾಣ ಪತ್ರಗಳಲ್ಲಿ 'ದಲಿತ' ಎನ್ನುವ ಪದವನ್ನು ಬಳಸದಂತೆ ಕೇಂದ್ರ ಗೃಹ ಸಚಿವಾಲಯ ಮತ್ತು ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯದ ನಿರ್ದೇಶನದಂತೆ ಸಮಾಜ ಕಲ್ಯಾಣ ಇಲಾಖೆಯು ಆದೇಶ ಹೊರಡಿಸಿದೆ ಎಂದು ತಿಳಿಸಿದ್ದಾರೆ. ಈ ಪದಗಳ ಬದಲಾಗಿ ರಾಜ್ಯದಲ್ಲಿ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಎಂದು ನಮೂದಿಸಬಹುದಾಗಿದೆ ಇದೆ ಸಮಯದಲ್ಲಿ ಅವರು ತಿಳಿಸಿದರು.