Job Description: ಚಂದನವನದ ನಟ ಚಿರಂಜೀವಿ ಸರ್ಜಾ ಅವರಿಗೆ ತೀವ್ರ ಉಸಿರಾಟದ ತೊಂದರೆಯಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರು ಎಳೆದಿದ್ದಾರೆ. ಇವರು ಹುಟ್ಟಿದ್ದು ಬೆಂಗಳೂರಿನಲ್ಲಿ. ತಮ್ಮ ಬಾಲ್ಯ ಶಿಕ್ಷಣವನ್ನು ಬಾಲ್ಡ್ವಿನ್ ಬಾಲಕರ ಫ್ರೌಡ ಶಾಲೆಯಲ್ಲಿ ಪೂರ್ಣಗೊಳಿಸಿದರು. ಇವರು ಸುಮಾರು 4 ವರ್ಷಗಳಿಂದ ಅವರ ಚಿಕ್ಕಪ್ಪರಾದ ಅರ್ಜುನ್ ಸರ್ಜಾ ರವರ ಸಹಾಯಕ ನಿರ್ದೇಶಕರಾಗಿ ಕೆಲಸವನ್ನು ಮಾಡಿ ನಂತರದ ದಿನಗಳಲ್ಲಿ ಅಂದರೆ 2009 ರಿಂದ ಬೆಳ್ಳಿ ಪರದೆಗೆ ಕಾಲಿಟ್ಟರು. 2009 ರಲ್ಲಿ ತೆರೆಗೆ ಬಂದ 'ವಾಯುಪುತ್ರ' ಎಂಬ ಕನ್ನಡ ಚಲನಚಿತ್ರದಲ್ಲಿ ಮುಖ್ಯಪಾತ್ರ ವಹಿಸಿದ್ದಾರೆ. ಕನ್ನಡ ಚಿತ್ರರಂಗದಲ್ಲಿ ವಿಶಿಷ್ಠ ನಟನೆಯ ಮೂಲಕ ಗುರ್ತಿಸಿಕೊಂಡಿದ್ದ ನಟ ಚಿರಂಜೀವಿ ಸರ್ಜಾ ಅವರಿಗೆ ಇಂದು ತೀವ್ರ ತರವಾದಂತ ಉಸಿರಾಟದ ತೊಂದರೆ ಕಾಣಿಸಿಕೊಂಡ ಹಿನ್ನಲೆ ಅವರನ್ನು ಕೂಡಲೇ ಕುಟುಂಬಸ್ಥರು ಹತ್ತಿರದ ಅಪಲೋ ಆಸ್ಪತ್ರೆಗೆ ದಾಖಲಿಸಿದರು ಕೂಡ ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ.