Job Description: ಶಿವಮೊಗ್ಗ: ಕರ್ನಾಟಕ ಸಂಘದ ಈ ವರ್ಷದ ಜೀವಮಾನ ಸಾಧನೆ ಪ್ರಶಸ್ತಿ ಘೋಷಣೆ ಮಾಡಿದ್ದು, ಈ ಪ್ರಶಸ್ತಿಗೆ ಡಾ.ಚಂದ್ರಶೇಖರ ಪಾಟೀಲ ಹಾಗೂ ಡಾ.ಎಚ್.ಎಸ್.ರಾಘವೇಂದ್ರ ರಾವ್ ಅವರನ್ನು ಆಯ್ಕೆ ಮಾಡಲಾಗಿದೆ. ಕಾವ್ಯ ಕ್ಷೇತ್ರದ ಮಧೂರಿವ ಸಾಧನೆ ಗುರುತಿಸಿ ಡಾ.ಚಂದ್ರಶೇಖರ ಪಾಟೀಲ ಅವರಿಗೆ ದ.ರಾ.ಬೇಂದ್ರೆ ಪ್ರಶಸ್ತಿ, ಮತ್ತು ವಿಮರ್ಶಾ ಕ್ಷೇತ್ರದ ಸಾಧನೆಗೆ ಡಾ.ಎಚ್.ಎಸ್.ರಾಘವೇಂದ್ರ ಅವರಿಗೆ ಪ್ರೊ. ತೀ.ನಂ. ಶ್ರೀಕಂಠಯ್ಯ ಪ್ರಶಸ್ತಿ ಯನ್ನು ಘೋಷಿಸಲಾಗಿದೆ. ಈ ಪ್ರಶಸ್ತಿಗಳು ತಲಾ 25 ಸಾವಿರ ರೂ. ನಗದು ಪುರಸ್ಕಾರ ಮತ್ತು ಸ್ಮರಣಿಕೆಯನ್ನು ಒಳಗೊಂಡಿದೆ ಎಂದು ಕರ್ನಾಟಕ ಸಂಘದ ಗೌರವ ಕಾರ್ಯದರ್ಶಿ ಡಾ. ಎಚ್. ಎಸ್. ನಾಗಭೂಷಣ ಮಾಹಿತಿ ನೀಡಿದ್ದಾರೆ.