Job Description: ಅಂತಾರಾಷ್ಟ್ರೀಯ ಕಾರ್ಮಿಕರ ಸಂಘಟನೆಯ ನಿರ್ಣಯದಂತೆ ಜೂ.12ರಂದು ವಿಶ್ವದಾದ್ಯಂತ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನವನ್ನು ಆಚರಿಸಲಾಗುತ್ತಿದೆ. ಈ ಆಚರಣೆ ಮೂಲಕ ಜಾಗತಿಕವಾಗಿ ಜನರಿಗೆ ಬಾಲಕಾರ್ಮಿಕತೆಯ ಬಗ್ಗೆ ಅರಿವು ಮೂಡಿಸುವದು ಅಂತಾರಾಷ್ಟ್ರೀಯ ಕಾರ್ಮಿಕ ಸಂಸ್ಥೆಯಾ ಮುಖ್ಯ ಉದ್ದೇಶವಾಗಿದೆ. ಆದರೆ ಕೋವಿಡ್-19ರ ಹಿನ್ನೆಲೆ ಯಲ್ಲಿ ಉಂಟಾದ ಆರ್ಥಿಕ ಹಿನ್ನಡೆ, ಕಾರ್ಮಿಕರ ಜೀವನ ಮತ್ತು ಜೀವನೋಪಾಯದ ಮೇಲೆ ಭಾರಿ ಪರಿಣಾಮ ಬೀರಿರುವದರಿಂದ ಈ ಬಿಕ್ಕಟ್ಟು ಸಾವಿರಾರು ದುರ್ಬಲ ಬಾಲ್ಯಾವಸ್ಥೆ ಹಾಗೂ ಕಿಶೋರಾವಸ್ಥೆಯ ಮಕ್ಕಳನ್ನು ಕಾರ್ಮಿಕ ಪದ್ಧತಿಗೆ ತಳ್ಳುವ ಸಾಧ್ಯತೆ ಇರುವ ಕಾರಣ ಮಕ್ಕಳನ್ನು ರಕ್ಷಿಸಲು ಹಿಂದೆಂದಿಗಿಂತಲೂ ಹೆಚ್ಚು ಶ್ರಮವಹಿಸುವ ಅಗತ್ಯತೆ ಇರುತ್ತದೆ. * ಬಾಲಕಾರ್ಮಿಕ ಹಾಗೂ ಕಿಶೋರಾವಸ್ಥೆಯ ಕಾರ್ಮಿಕರ (ನಿಷೇಧ ಮತ್ತು ನಿಯಂತ್ರಣ) ತಿದ್ದುಪಡಿ ಕಾಯ್ದೆ 1986: - 14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳನ್ನು ಯಾವುದೇ ವೃತ್ತಿ ಮತ್ತು ಕೆಲಸಕ್ಕೆ ನೇಮಕ ಮಾಡಿಕೊಳ್ಳುವುದು ನಿಷೇಧಿಸಲ್ಪಟ್ಟಿದೆ. - 14ರಿಂದ 18 ವರ್ಷದೊಳಗಿನ ಕಿಶೋರಾವಸ್ಥೆಯ ಕಾರ್ಮಿಕರನ್ನು ಅಪಾಯ ಕಾರಿ ಉದ್ದಿಮೆಗಳಲ್ಲಿ ನೇಮಿಸಿಕೊಳ್ಳುವುದನ್ನು ನಿಷೇಧಿಸಲಾಗಿದೆ.