Job Description: ಜೂನ್ 14, 2020 ರಂದು ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರು ಮುಂಬೈ ನಗರದ ಅಪಾರ್ಟ್ಮೆಂಟ್ ಒಂದರಲ್ಲಿ ಶವವಾಗಿ ಪತ್ತೆಯಾಗಿದ್ದರು. ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಮುಂಬೈ ಪೊಲೀಸರು ಮಾಹಿತಿ ನೀಡಿದ್ದಾರೆ. *ಹಲವಾರು TV ಸೀರೀಸ್ ಗಳಲ್ಲಿ ಮುಖ್ಯ ಪಾತ್ರದಲ್ಲಿ ನಟಿಸಿದ್ದ ಇವರು, ಇತ್ತೀಚಿಗೆ ಭಾರತೀಯ ಕ್ರಿಕೆಟರ್ ಎಂ ಎಸ್ ಧೋನಿಯವರ ಕುರಿತಾದ "ಎಂ ಎಸ್ ಧೋನಿ: ದಿ ಅನ್ಟೋಲ್ಡ್ ಸ್ಟೋರಿ" ಮುಖ್ಯ ಪಾತ್ರದಲ್ಲಿ ನಟಿಸಿ, ಈ ಚಿತ್ರದಲ್ಲಿನ ನಟನೆಗಾಗಿ 2017 ರಲ್ಲಿ ಮೆಲ್ಬೋರ್ನ್‌ನ ಭಾರತೀಯ ಚಲನಚಿತ್ರೋತ್ಸವದಲ್ಲಿ ಅತ್ಯುತ್ತಮ ನಟ ಪ್ರಶಸ್ತಿ ಪಡೆದಿದ್ದರು. ಅಲ್ಲದೆ ಹಲವು ಸ್ಕ್ರೀನ್ ಪ್ರಶಸ್ತಿಗಳು, ಗಿಲ್ಡ್ ಪ್ರಶಸ್ತಿಗಳು, ಐಟಿಎ ಪ್ರಶಸ್ತಿಗಳನ್ನು ಪಡೆದಿರುತ್ತಾರೆ.