Job Description: ಪ್ರಸ್ತುತ ರಾಜ್ಯದಲ್ಲಿ ಬೆಂಗಳೂರು ನಗರವು ಮಾತ್ರ ಅಂತಾರಾಷ್ಟ್ರೀಯ ಕ್ರೀಡಾಂಗಣವನ್ನು ಹೊಂದಿದ್ದು, ಉತ್ತರ ಕನ್ನಡ ಜಿಲ್ಲೆಯಲ್ಲಿ ರಾಜ್ಯದಲ್ಲೇ ಎರಡನೇ ಅಂತಾರಾಷ್ಟ್ರೀಯ ಕ್ರೀಡಾಂಗಣ ಆರಂಭಿಸಲು ಸಿದ್ಧತೆ ನಡೆಸಲಗುತ್ತಿದೆ. ಈ ನಿಟ್ಟಿನಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್ ಅವರು ಕೆ.ಎಸ್.ಸಿ.ಎ ಅಧ್ಯಕ್ಷ ರೋಜರ್ ಬಿನ್ನಿ ಹಾಗೂ ಕಾರ್ಯದರ್ಶಿ ಸಂತೋಷ್ ಮೇನನ್ ಅವರನ್ನು ಅವರ ಬೆಂಗಳೂರಿನ ಕಚೇರಿಯಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಪ್ರಸ್ತುತ ಅಂತಾರಾಷ್ಟ್ರೀಯ ಕ್ರೀಡಾಂಗಣ ನಿರ್ಮಾಣಕ್ಕಾಗಿ ಕಾರವಾರ-ಗೋವಾ ಗಡಿ ಭಾಗದ ಕಾಳಿನದಿ ಹಾಗೂ ಅರಬ್ಬಿ ಸಮದ್ರ ಸೇರುವ ಸಂಗಮ ಸ್ಥಳವಾದ ಸದಾಶಿವಗಡ್‍ನಲ್ಲಿ 12 ಎಕರೆ ಜಮೀನನನ್ನು ನಿಗದಿ ಮಾಡಲಾಗಿದೆ. ಪ್ರಸಕ್ತ ಬಜೆಟ್‍ನಲ್ಲಿ ಅನುಮೋದನೆ ಪಡೆದು ಕಾರ್ಯ ಪ್ರಾರಂಭಿಸಲಾಗುತ್ತದೆ.