Job Description: ಮಣಿಪಾಲ : ಪ್ರಸ್ತುತ ಸಿಕ್ಕಿಂ-ಮಣಿಪಾಲ ವಿವಿಯಲ್ಲಿ ಕುಲಪತಿಯಾಗಿರುವ ನಿವೃತ್ತ ಲೆಫ್ಟಿನೆಂಟ್ ಜನರಲ್ ಡಾ.ಎಂ.ಡಿ.ವೆಂಕಟೇಶ್ ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಷನ್ (ಮಾಹೆ)(MAHE)ನ ನೂತನ ಕುಲಪತಿಯಾಗಿ ನೇಮಕಗೊಂಡಿದ್ದಾರೆ. ಪ್ರಸ್ತುತ ಡಾ. ಎಚ್.ವಿನೋದ್ ಭಟ್ ಅವರು ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಷನ್ ನ ಕುಲಪತಿಯಾಗಿ ಸೇವೆ ಸಲ್ಲಿಸುತ್ತಿದ್ದು, ಇದೆ ಜುಲೈ 01 ರಂದು ಅವರು ನಿವೃತ್ತಿಗೊಳ್ಳಲಿದ್ದಾರೆ. ಕೇಂದ್ರ ಸರಕಾರದ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯದಿಂದ ಇನ್‌ಸ್ಟಿಟ್ಯೂಟ್ ಆಫ್ ಎಮಿನೆನ್ಸ್ ಎಂದು ಗುರುತಿಸಲ್ಪಟ್ಟಿರುವ MAHE ಯ ನೂತನ ಕುಲಪತಿಯಾಗಿ ಡಾ.ಎಂ.ಡಿ.ವೆಂಕಟೇಶ್ ಜು.1ರಂದು ಅಧಿಕಾರ ಸ್ವೀಕರಿಸಲಿದ್ದಾರೆ.