Job Description: ಬೆಂಗಳೂರು : ಕರ್ನಾಟಕ ರಾಜ್ಯ ಸರ್ಕಾರವು ಕೊರೊನ ಸೋಂಕಿನ ಬಗ್ಗೆ ರಾಜ್ಯದ ಜನ ಸಮುದಾಯದಲ್ಲಿ ಹೆಚ್ಚಿನ ಜಾಗೃತಿ ಮೂಡಿಸಲು ಇಂದು 'ಮಾಸ್ಕ್ ದಿನ' ವನ್ನಾಗಿ ಆಚರಿಸುವಂತೆ ರಾಜ್ಯ ಸರಕಾರ ಕರೆ ನೀಡಿದೆ ಇಂದು ಎಲ್ಲಾ ಜಿಲ್ಲಾ ಮತ್ತು ತಾಲ್ಲೂಕು ಆಡಳಿತವು ಚುನಾಯಿತ ಪ್ರತಿನಿಧಿಗಳು, ಗಣ್ಯ ವ್ಯಕ್ತಿಗಳು, ವೈದ್ಯಕೀಯ ಸಿಬ್ಬಂದಿಗಳು ಆಯಾ ಪ್ರದೇಶಗಳ ಸಾರ್ವಜನಿಕರಿಗೆ ಪಾದಯಾತ್ರೆಯ ಮೂಲಕ ಕೊರೊನ ಬಗ್ಗೆ ಜಾಗೃತಿ ಮೂಡಿಸುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್ ಆದೇಶಿಸಿದ್ದಾರೆ.