Job Description: ರಿಲಯನ್ಸ್ ಇಂಡಸ್ಟ್ರೀಸ್ ಮ್ಯಾನೇಜಿಂಗ್ ಡೈರೆಕ್ಟರ್ ಮತ್ತು ಅಧ್ಯಕ್ಷರು ಆಗಿರುವ ಮುಕೇಶ್ ಅಂಬಾನಿ ಅವರು ವಿಶ್ವದ ಟಾಪ್ 10 ಶ್ರೀಮಂತರ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ. ಇತ್ತೀಚಿಗೆ ಫೋರ್ಬ್ಸ್ ನವರ ರಿಯಲ್ ಟೈಮ್ ಬಿಲಿಯನೇರ್ ಗಳ ಪಟ್ಟಿ ಪ್ರಕಟವಾಗಿದ್ದು, ಇದರಲ್ಲಿ ಮುಕೇಶ್ ಅವರ ಆಸ್ತಿಯ ಒಟ್ಟು ಮೌಲ್ಯ 6,460 ಕೋಟಿ ಅಮೆರಿಕನ್ ಡಾಲರ್ ಎಂದು ತಿಳಿಸಲಾಗಿದೆ. * ಅಮೆಜಾನ್ ಸ್ಥಾಪಕ ಜೆಫ್ ಬೆಜೋಸ್ ಒಟ್ಟು 16,040 ಕೋಟಿ ಅಮೆರಿಕನ್ ಡಾಲರ್ ಆಸ್ತಿ ಹೊಂದುವ ಮೂಲಕ ಈ ಪಟ್ಟಿಯಲ್ಲಿ ಮೊದಲ ಸ್ಥಾನ ಪಡೆದಿದ್ದಾರೆ. * ಬಿಲ್ ಗೇಟ್ಸ್ 10,990 ಕೋಟಿ ಅಮೆರಿಕನ್ ಡಾಲರ್ ಆಸ್ತಿಯೊಂದಿಗೆ ನಂತರದ ಸ್ಥಾನದಲ್ಲಿದ್ದಾರೆ. * ಗೂಗಲ್ ಸಹ ಸಂಸ್ಥಾಪಕ ಲ್ಯಾರಿ ಪೇಜ್ 6480 ಕೋಟಿ ಡಾಲರ್ ಆಸ್ತಿಯೊಂದಿಗೆ ಮುಕೇಶ್ ಅಂಬಾನಿಗಿಂತ ಒಂದು ಸ್ಥಾನ ಮೇಲಿದ್ದಾರೆ.