Job Description: ವಿಜಯಪುರ : ರಾಜ್ಯದ ಏಕೈಕ ಮಾಹಿಳಾ ವಿಶ್ವವಿದ್ಯಾಲಯವಾದ ವಿಜಯಪುರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಪ್ರಸ್ತುತ ಸೇವೆಯಲ್ಲಿರುವ ಹಾಲಿ ಕುಲಪತಿ ಪ್ರೊ.ಸಬಿಹಾ ಭೂಮಿಗೌಡ ಅವರು ನಾಲ್ಕು ವರ್ಷಗಳ ಸೇವೆಯ ನಂತರ ಇದೀಗ ನಿವೃತ್ತಿಯಾದ ಹಿನ್ನೆಲೆಯಲ್ಲಿ ಅವರ ಸ್ಥಾನಕ್ಕೆ ನೂತನವಾಗಿ ಸಮಾಜ ವಿಜ್ಞಾನದ ಡೀನ್ ಪ್ರೊ.ಓಂಕಾರ ಕಾಕಡೆ ಅವರನ್ನು ನೇಮಕ ಮಾಡಿ ರಾಜ್ಯದ ರಾಜ್ಯಪಾಲರು ಹಾಗೂ ವಿವಿಯ ಕುಲಾಧಿಪತಿಗಳು ಆದ ವಜುಬಾಯಿ ವಾಲಾ ಆದೇಶ ಹೊರಡಿಸಿದ್ದಾರೆ.