Job Description: ವಾಶಿಂಗ್ಟನ್ : ಭಾರತ ಮತ್ತು ಚೀನಾ ರಾಷ್ಟ್ರಗಳ ಮಧ್ಯ ಗಲ್ವಾನ್ ಕಣಿವೆಯಲ್ಲಿ ಗಡಿ ವಿವಾದ ತರಕ್ಕಾಕೇರಿರುವ ಈ ಸಮಯದಲ್ಲಿ ಭಾರತ ಮತ್ತು ಚೀನಾಗಳೆರೆಡರೊಂದಿಗೂ ಅಮೆರಿಕ ಮಾತುಕತೆ ನಡೆಸಿ ಪರಿಸ್ಥಿತಿಯನ್ನು ಶಾಂತಗೊಳಿಸಲು ಪ್ರಯತ್ನಿಸಲಾಗುವದೆಂದು ಆ ದೇಶದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ. ''ಇದೊಂದು ಅತ್ಯಂತ ಕಠಿಣ ಪರಿಸ್ಥಿತಿಯಾಗಿದ್ದು. ನಾವು ಭಾರತ ಮತ್ತು ಚೀನಾ ರಾಷ್ಟ್ರಗಳೊಂದಿಗೆ ಮಾತನಾಡುತ್ತಿದ್ದೇವೆ. ಆ ದೇಶಗಳು ಅಲ್ಲಿ ದೊಡ್ಡ ಸಮಸ್ಯೆಗೆ ಸಿಲುಕಿಕೊಂಡಿವೆ'' ಎಂದು ಶ್ವೇತಭವನದಲ್ಲಿ ಟ್ರಂಪ್ ಸುದ್ದಿಗಾರರಿಗೆ ಮಾಹಿತಿ ನೀಡಿದರು.