Job Description: ನವದೆಹಲಿ: ಭಾರತ ಮತ್ತು ಚೀನಾ ರಾಷ್ಟ್ರಗಳ ನಡುವೆ ಉದ್ಭವಿಸಿರುವ ಗಡಿ ಸಮಸ್ಯೆಗೆ ಇತಿಶ್ರೀ ಹಾಡಲು ಉಭಯ ರಾಷ್ಟ್ರಗಳ ಕಮಾಂಡರ್ ಮಟ್ಟದ ಮಾತುಕತೆ ಫಲಪ್ರದವಾಗಿದ್ದು, ಪೂರ್ವ ಲಡಾಖ್‌ನ ಸಂಘರ್ಷದ ಪ್ರದೇಶಗಳಿಂದ ಸೈನಿಕರನ್ನು ಹಿಂದಕ್ಕೆ ಕರೆಸಿಕೊಳ್ಳಲು ಭಾರತ ಮತ್ತು ಚೀನಾ ಒಪ್ಪಿಗೆ ಸೂಚಿಸಿವೆ. * ಸುಮಾರು ಒಂದೂವರೆ ತಿಂಗಳಿಂದ ಎರಡೂ ದೇಶಗಳ ನಡುವೆ ಬಿಕ್ಕಟ್ಟಿಗೆ ಕಾರಣವಾಗಿರುವ ವಿವಾದಾತ್ಮಕ ಗಡಿ ಪ್ರದೇಶದಲ್ಲಿ ಶಾಂತಿ ನೆಲೆಸುವಂತೆ ಮಾಡಲು ಉಭಯ ರಾಷ್ಟ್ರಗಳು ಸಮ್ಮತಿಸಿವೆ.