Job Description: ನವದೆಹಲಿ: ಬಾಹ್ಯಾಕಾಶ ಸಂಶೋಧನಾ ಕ್ಷೇತ್ರದಲ್ಲಿ ನೂತನ ಚಟುವಟಿಕೆಗಳಲ್ಲಿ ಭಾಗಿಯಾಗಲು ಖಾಸಗಿ ಕಂಪನಿಗಳಿಗೆ ಕೇಂದ್ರ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಈ ಅನುಮತಿಯಿಂದಾಗಿ ಈ ಕ್ಷೇತ್ರದ ತ್ವರಿತ ಬೆಳವಣಿಗೆಗೆ ಕಾಣಬಹುದಾಗಿದ್ದು, ಭಾರತದ ಕಂಪನಿಗಳು ಜಾಗತಿಕ ಮಟ್ಟದಲ್ಲಿ ಮಹತ್ವ ಪಡೆಯಲಿವೆ. ಅಲ್ಲದೆ ಈ ನಿರ್ಧಾರದಿಂದಾಗಿ ಭಾರಿ ಪ್ರಮಾಣದಲ್ಲಿ ಉದ್ಯೋಗಗಳೂ ಸೃಷ್ಟಿಯಾಗಲಿದೆ ಎಂದು ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಮಾಹಿತಿ ನೀಡಿದ್ದಾರೆ. * IN-SPACe ಎಂಬ ಭಾರತೀಯ ರಾಷ್ಟ್ರೀಯ ಬಾಹ್ಯಾಕಾಶ ಉತ್ತೇಜನ ಮತ್ತು ಅಧಿಕೃತೀಕರಣ ಕೇಂದ್ರವನ್ನು ಕೇಂದ್ರ ಸರ್ಕಾರ ಆರಂಭಿಸಿದ್ದು, ಈ ಸಂಸ್ಥೆಯು ISRO ದ ಮೂಲಸೌಕರ್ಯಗಳನ್ನು ಖಾಸಗಿ ಕಂಪನಿಗಳಿಗೆ ನ್ಯಾಯಯುತವಾಗಿ ಲಭ್ಯವಿರುವಂತೆ ನೋಡಿಕೊಳ್ಳಲಿದೆ.