Job Description: ಪಂಜಾಬ್‌ನ ಮುಖ್ಯ ಕಾರ್ಯದರ್ಶಿಯಾಗಿ 1987 ರ ಭಾರತೀಯ ಆಡಳಿತ ಸೇವೆ (ಐಎಎಸ್) ಬ್ಯಾಚ್ ಅಧಿಕಾರಿಯಾದ ವಿನಿ ಮಹಾಜನ್ ಅವರು ಜೂನ್ 26, 2020 ರಂದು ಆಯ್ಕೆಯಾಗಿದ್ದಾರೆ. ಈ ಮೂಲಕ ಇವರು ಪಂಜಾಬ್ ರಾಜ್ಯದ ಮೊದಲ ಮಹಿಳಾ ಮುಖ್ಯ ಕಾರ್ಯದರ್ಶಿ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ಈ ಮೊದಲು ಇವರು 1995 ರಲ್ಲಿ ರೋಪರ್ ಜಿಲ್ಲೆಯ ಜಿಲ್ಲಾಧಿಕಾರಿ ಯಾಗಿ ಅಧಿಕಾರ ವಹಿಸಿಕೊಳ್ಳುವ ಮೂಲಕ ಪಂಜಾಬ್ ರಾಜ್ಯದಲ್ಲಿ ಜಿಲ್ಲಾಧಿಕಾರಿ ಹುದ್ದೆಯನ್ನು ಅಲಂಕರಿಸಿದ ಮೊದಲ ಮಹಿಳಾ ಅಧಿಕಾರಿ ಎಂಬ ಹೆಗ್ಗಳಿಕೆಯನ್ನು ಹೊಂದಿದ್ದಾರೆ.