Job Description: ಲಂಡನ್ : ಇತ್ತೀಚಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಲಂಡನ್ ನಲ್ಲಿ ಆಯೋಜನೆಗೊಂಡಿರುವ ಇಂಡಿಯಾ ಗ್ಲೋಬಲ್ ವೀಕ್ 2020 ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದರು. ವಿಡಿಯೋ ಕಾನ್ಫರೆನ್ಸ್ ಮೂಲಕ ಸಮಾರಂಭದಲ್ಲಿ ಪ್ರಧಾನಿ ಮೋದಿ ಭಾಗಿಯಾಗಿ ಮಾತನಾಡಿದ್ದು, ಭಾರತದಲ್ಲಿ ವ್ಯಾಪಾರ, ವಿದೇಶಿ ಹೂಡಿಕೆ ಮಾಡಲು ಇರುವ ಅವಕಾಶಗಳ ಬಗ್ಗೆ ಮಾಹಿತಿ ನೀಡಿದರು. ಈ ಕಾರ್ಯಕ್ರಮದಲ್ಲಿ 30 ವಿವಿಧ ದೇಶಗಳ 5 ಸಾವಿರ ಪ್ರತಿನಿಧಿಗಳು ಪಾಲ್ಗೊಳ್ಳಲಿದ್ದು, ಒಟ್ಟು ಮೂರು ದಿನದ ಈ ಕಾರ್ಯಕ್ರಮ ನಡೆಯಲಿದೆ.