Job Description: ರೇವಾ : ಭಾರತದ ಪ್ರಧಾನಿಯವರಾದ ನರೇಂದ್ರ ಮೋದಿಯವರು ಮಧ್ಯಪ್ರದೇಶದ ರೇವಾ ಜಿಲ್ಲೆಯಲ್ಲಿ ನಿರ್ಮಿಸಿರುವ ಏಷ್ಯಾದ ಅತಿ ದೊಡ್ಡ ಸೋಲಾರ್ ವಿದ್ಯುತ್ ಉತ್ಪಾದನಾ ಘಟಕವನ್ನು ಉದ್ಘಾಟನೆ ಮಾಡಲಿದ್ದಾರೆ. * ಈ ಘಟಕವು ಏಷ್ಯಾದಲ್ಲೇ ಅತಿ ದೊಡ್ಡ ಸೋಲಾರ್ ವಿದ್ಯುತ್ ಉತ್ಪಾದನಾ ಘಟಕವಾಗಿದೆ. * 750 ಮೆಗಾವ್ಯಾಟ್ ಸಾಮರ್ಥ್ಯ ಹೊಂದಿದ್ದು, ಅಮೆರಿಕದ ಕ್ಯಾಲಿಫೋರ್ನಿಯಾದ ಅತಿ ದೊಡ್ಡ ಸೋಲಾರ್ ಪ್ಲಾಂಟ್ನ ದಾಖಲೆ ಮುರಿದು ಹಾಕಲಿದೆ. * ಈ ಘಟಕವು ಬರೋಬ್ಬರಿ 3,700 ಎಕರೆ ಪ್ರದೇಶದಲ್ಲಿ ನಿರ್ಮಾಣಗೊಂಡಿದ್ದು, ಇದಕ್ಕಾಗಿ 4,500 ಕೋಟಿ ರೂ ವೆಚ್ಚ ಮಾಡಲಾಗಿದೆ.