Job Description: ದುಬೈ: ಇತ್ತೀಚಿಗೆ ವೆಸ್ಟ್ ಇಂಡೀಸ್ ತಂಡದ ವಿರುದ್ಧದ 2ನೇ ಟೆಸ್ಟ್ ಕ್ರಿಕೆಟ್ ಪಂದ್ಯದಲ್ಲಿ ಇಂಗ್ಲೆಂಡ್ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ ಬೆನ್ ಸ್ಟೋಕ್ಸ್ ಅವರು ಪ್ರಸ್ತುತ ವಿಶ್ವದ ನಂ. 1 ಆಲ್ರೌಂಡರ್ ಎನಿಸಿದ್ದಾರೆ. ICC ಟೆಸ್ಟ್ ಆಲ್ರೌಂಡರ್ ರ್ಯಾಂಕಿಂಗ್ ನಲ್ಲಿ ವೆಸ್ಟ್ ಇಂಡೀಸ್ ನಾಯಕ ಜೇಸನ್ ಹೋಲ್ಡರ್ ಇಲ್ಲಿಯವರೆಗೂ ಮೊದಲ ಸ್ಥಾನದಲ್ಲಿದ್ದರು. ಅವರನ್ನು ಹಿಂದಿಕ್ಕಿ ಸ್ಟೋಕ್ಸ್ ಇದೇ ಮೊದಲ ಬಾರಿಗೆ ನಂ. 1 ಪಟ್ಟಕ್ಕೇರಿದ್ದಾರೆ. ಅಲ್ಲದೆ ಬ್ಯಾಟಿಂಗ್ ನಲ್ಲೂ ಕೂಡ ಜೀವನಶ್ರೇಷ್ಠ 3ನೇ ಸ್ಥಾನಕ್ಕೇರಿದ್ದಾರೆ. * ಪ್ರಸ್ತುತ ಭಾರತದ ರವೀಂದ್ರ ಜಡೇಜಾ 3ನೇ ಸ್ಥಾನದಲ್ಲಿದ್ದಾರೆ. ಆಸ್ಟ್ರೇಲಿಯಾದ ಮಿಚೆಲ್ ಸ್ಟಾರ್ಕ್ 4 ಮತ್ತು ಭಾರತದ ಆರ್. ಅಶ್ವಿನ್ 5ನೇ ಸ್ಥಾನದಲ್ಲಿದ್ದಾರೆ.