Job Description: ನವದೆಹಲಿ: ಭಾರತೀಯ ಸೇನೆಯಲ್ಲಿರುವ ಮಹಿಳಾ ಅಧಿಕಾರಿಗಳಿಗೆ ಶಾಶ್ವತ ಆಯೋಗ ಸ್ಥಾಪಿಸುವಂತೆ ಕೇಂದ್ರ ಸರ್ಕಾರ ಆದೇಶಿಸಿರುವದಾಗಿ ಭಾರತೀಯ ಸೇನೆ ಮಾಹಿತಿ ನೀಡಿದೆ. ಕೆಲ ದಿನಗಳ ಹಿಂದೆ ಭಾರತೀಯ ಸೇನೆಯಲ್ಲಿ ಮಹಿಳಾ ಅಧಿಕಾರಿಗಳಿಗೂ ಕಮಾಂಡರ್ ಸ್ಥಾನ ಕೊಡಬೇಕು, ಹಾಗೂ ಅವರಿಗೆ ಶಾಶ್ವತ ಆಯೋಗ ಸ್ಥಾಪಿಸುವ ಮೂಲಕ ಲಿಂಗ ತಾರತಮ್ಯ ಹೋಗಲಾಡಿಸಬೇಕು ಎಂದು ಸುಪ್ರೀಂ ಕೋರ್ಟ್ ತನ್ನ ತೀರ್ಪಿನ ಮೂಲಕ ಅಭಿಪ್ರಾಯ ವ್ಯಕ್ತಪಡಿಸಿದ ಹಿನ್ನಲೆ ಕೇಂದ್ರ ಸರ್ಕಾರ ಈಗ ಆಯೋಗ ಸ್ಥಾಪನೆಗೆ ಆದೇಶ ಹೊರಡಸಿದೆ.