Job Description: ನವದೆಹಲಿ : ದೇಶದಾದ್ಯಂತ ಕೊರೊನಾ ವೈರಸ್ ಹಾವಳಿ ತೀವ್ರವಾಗಿದ್ದು, ಇದು ಆಗಸ್ಟ್ 15ರ ಸ್ವಾತಂತ್ರೋತ್ಸವ ದಿನಾಚರಣೆ ಸಡಗರ-ಸಂಭ್ರಮಕ್ಕೆ ಅಡ್ಡಿಯುಂಟು ಮಾಡಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರವು ಈ ಬಾರಿಯ ಸ್ವಾತಂತ್ರೋತ್ಸವ ದಿನಾಚರಣೆಯನ್ನು ಸರಳವಾಗಿ ಮತ್ತು ಜಾಗೃತೆಯಿಂದ ಆಚರಿಸುವಂತೆ ಎಲ್ಲ ರಾಜ್ಯಗಳಿಗೂ ಸುತ್ತೋಲೆಗಳನ್ನು ಹೊರಡಿಸಿದೆ. * ಅಲ್ಲದೆ, ಕೇಂದ್ರ ಗೃಹ ಸಚಿವಾಲಯ ಸ್ವಾತಂತ್ರ ದಿನಾಚರಣೆಯಂದು ಅನುಸರಿಸಬೇಕಾದ ಕ್ರಮಗಳ ಕುರಿತು ವಿಶೇಷ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. - ಸ್ವಾತಂತ್ರೋತ್ಸವ ಸಂದರ್ಭದಲ್ಲಿ ಅತಿ ಹೆಚ್ಚು ಜನರು ಸೇರಬಾರದು. - ಅತ್ಯಂತ ಸರಳವಾಗಿ ಮತ್ತು ಮುಂಜಾಗ್ರತಾ ಕ್ರಮಗಳೊಂದಿಗೆ ರಾಷ್ಟ್ರೀಯ ಹಬ್ಬ ಆಚರಿಸಬೇಕು. - ಸಾಮಾಜಿಕ ಅಂತರ ಕಾಯ್ಸುಕೊಳ್ಳುವಿಕೆ, ಸ್ಯಾಬಿಟೈಸರ್ ಬಳಕೆ, ಮತ್ತು ಮಾಸ್ಕ್ ಧರಿಸುವುದು ಕಡ್ಡಾಯ ಎಂದು ಕೇಂದ್ರ ಸರ್ಕಾರ ಮಾರ್ಗಸೂಚಿಯಲ್ಲಿ ತಿಳಿಸಿದೆ.