Job Description: ನವದೆಹಲಿ: ಕೇಂದ್ರ ಸಚಿವ ಸಂಪುಟ ಬುಧವಾರ ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಅಂಗೀಕರಿಸಿದ್ದು, ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯವನ್ನು ಶಿಕ್ಷಣ ಸಚಿವಾಲಯವೆಂದು ಮರುನಾಮಕರಣ ಮಾಡಲು ನಿರ್ಧರಿಸಲಾಗಿದೆ ಎಂದು ತಿಳಿದು ಬಂದಿದೆ. ರಾಷ್ಟ್ರೀಯ ಶಿಕ್ಷಣ ನೀತಿಯನ್ನು 1986ರಲ್ಲಿ ರೂಪಿಸಲಾಗಿತ್ತು, ಹಾಗೂ 1992ರಲ್ಲಿ ಇದಕ್ಕೆ ಮಾರ್ಪಾಡು ಮಾಡಲಾಯಿತು. ಅದು ಜಾರಿಗೆ ಬಂದ ಸುಮಾರು ಮೂರು ದಶಕಗಳ ನಂತರ ಹೊಸ ಶಿಕ್ಷಣ ನೀತಿಗೆ ಅನುಮೋದನೆ ನೀಡಲಾಗಿದೆ ಎಂದು ಮಾನವ ಸಂಪನ್ಮೂಲ ಸಚಿವಾಲಯ ತಿಳಿಸಿದೆ.