Job Description: ಬೆಂಗಳೂರು: ರಾಜ್ಯದ ಯುವ ಉದ್ಯಮಿಗಳನ್ನು ಪ್ರೋತ್ಸಾಹಿಸಲು ಸುಮಾರು 34 ಕೋಟಿ ರೂ. ವೆಚ್ಚದಲ್ಲಿ ಬೆಂಗಳೂರಿನ ಎಚ್ಎಸ್ಆರ್ ಬಡಾವಣೆಯಲ್ಲಿ ನಿರ್ಮಿಸಿರುವ ಸುವ್ಯವಸ್ಥಿತ "ಐಟಿ-ಬಿಟಿ ಸ್ಟಾರ್ಟ್ಅಪ್ ಮತ್ತು ಇನ್ಕ್ಯೂಬೇಷನ್ ಕೇಂದ್ರ"ಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಚಾಲನೆ ನೀಡಿದರು. * ನಗರದ ಎಚ್ಎಸ್ಆರ್ ಬಡಾವಣೆಯಲ್ಲಿ 75,000 ಚದರ ಅಡಿ ವಿಸ್ತೀರ್ಣದಲ್ಲಿ ಕೇಂದ್ರವನ್ನು ಆರಂಭಿಸಲಾಗಿದೆ. * ಕರ್ನಾಟಕ ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮ (ಕಿಯೋನಿಕ್ಸ್) ಇದನ್ನು ಅಭಿವೃದ್ಧಿಪಡಿಸಿದೆ.