Job Description: ಬೆಂಗಳೂರು: ಕರ್ನಾಟಕದಲ್ಲಿ ಕೈಗಾರಿಕಾ ವ್ಯಾಜ್ಯ ಗಳ ಕಾಯ್ದೆಗೆ ರಾಜ್ಯ ಸರ್ಕಾರ ಜಾರಿಗೆ ತಂದಿರುವ ಸುಗ್ರಿವಾಜ್ಞೆಗೆ ರಾಜ್ಯ ರಾಜ್ಯಪಾಲರಾದ ಶ್ರೀ ವಜುಭಾಯಿ ವಾಲಾ ಒಪ್ಪಿಗೆ ನೀಡಿದ್ದಾರೆ. * ರಾಜ್ಯದಲ್ಲಿ ಕಾರ್ಮಿಕರು ಮತ್ತು ಕಾರ್ಖಾನೆ ಮಾಲಿಕರ ನಡುವಿನ ವ್ಯಾಜ್ಯಗಳನ್ನು ಶಮನಗೊಳಿಸಿ ಸುಗಮ ಆಡಳಿತ ನಡೆಸಲು ಅನುಕೂಲವಾಗುವಂತೆ ಕೈಗಾರಿಕೆಗಳ ವಿವಾದಗಳ ಅಧಿನಿಯಮ 1947, ಕಾರ್ಖಾನೆಗಳ ಅಧಿನಿಯಮ 1948, ಮತ್ತು ಗುತ್ತಿಗೆ ಕಾರ್ಮಿಕರ ಅಧಿನಿಯಮ 1970 ಕ್ಕೆ ತಿದ್ದುಪಡಿ ಮಾಡಿ ಸುಗ್ರೀ ವಾಜ್ಞೆ ಹೊರಡಿಸಲು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ರಾಜ್ಯ ಸರ್ಕಾರ ತೀರ್ಮಾನ ಕೈಗೊಂಡಿತ್ತು.