Job Description: ಅಯೋಧ್ಯೆ: ಭಾರತದ ಪ್ರಧಾನಿ ನರೇಂದ್ರ ಮೋದಿಯವರು ದಿನಾಂಕ 05 ಆಗಸ್ಟ್ 2020 ರಂದು ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕಾಗಿ ಭೂಮಿಪೂಜೆ ಕಾರ್ಯವನ್ನು ನೆರವೇರಿಸಿದರು. ಈ ಶಿಲಾನ್ಯಾಸಕ್ಕಾಗಿ ಪ್ರಧಾನಿಯವರು ಒಟ್ಟು 22.6 ಕೆಜಿ ತೂಕದ ಐದು ಇಟ್ಟಿಗೆಗಳನ್ನು ಬಳಸಿದರು. ಈ ಐದು ಇಟ್ಟಿಗೆಗಳಿಗೂ ನಂದಾ, ಭದ್ರಾ, ಜಯಾ, ರಿಕ್ಷಾ, ಪೂರ್ಣಾ ಎಂದು ಹೆಸರಿಸಲಾಗಿತ್ತು. ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೇರಿ ಹಲವು ಗಣ್ಯರು ಮತ್ತು ಧರ್ಮದರ್ಶಿಗಳು ಪಾಲ್ಗೊಂಡಿದ್ದರು.