Job Description: ದೆಹಲಿ: ಭಾರತದ ನೂತನ ಕಂಟ್ರೋಲರ್ ಮತ್ತು ಆಡಿಟರ್ ಜನರಲ್ (ಸಿಎಜಿ) ಆಗಿ ಗಿರೀಶ್ ಚಂದ್ರ ಮುಮ್ಮು ಅವರನ್ನು ನೇಮಕ ಮಾಡಲಾಗಿದ್ದು, ಈ ಕುರಿತು ಆರ್ಥಿಕ ವ್ಯವಹಾರಗಳ ಇಲಾಖೆಯ ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಗಿರೀಶ್ ಚಂದ್ರ ಮುಮ್ಮುರವರು ಇತ್ತೀಚಿಗೆ ಜಮ್ಮು ಕಾಶ್ಮೀರ ಲೆಫ್ಟಿನೆಂಟ್ ಗರ್ವನರ್ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಹಾಗು ಇವರು ಇದೀಗ, ಕಂಟ್ರೋಲರ್ ಮತ್ತು ಆಡಿಟರ್ ಜನರಲ್ (ಸಿಎಜಿ) ಆಗಿ ರಾಷ್ಟ್ರಪತಿ ಭವನದಲ್ಲಿ ಅಧಿಕಾರ ಸ್ವೀಕರಿಸಲಿದ್ದಾರೆ. * ಒಂದು ವರ್ಷಗಳ ಕಾಲ ಜಮ್ಮು ಕಾಶ್ಮೀರದ ಲೆಫ್ಟಿನೆಂಟ್ ಗರ್ವನರ್ ಆಗಿ ಸೇವೆ ಸಲ್ಲಿಸಿ ರಾಜೀನಾಮೆ ನೀಡಿದ ಇವರ ಸ್ಥಾನಕ್ಕೆ ಮಾಜಿ ಕೇಂದ್ರ ಸಚಿವ ಮನೋಜ್ ಸಿನ್ಹಾ ಅವರನ್ನು ಆಯ್ಕೆ ಮಾಡಲಾಗಿದೆ.