Job Description: ಈ ವರ್ಷದ ಅಂತ್ಯದಲ್ಲಿ ಆಸ್ಟೇಲಿಯಾದಲ್ಲಿ ನಡೆಸಲು ಉದ್ದೇಶಿಸಲಾಗಿದ್ದ ಪುರುಷರ T20 ವಿಶ್ವಕಪ್ ಕ್ರಿಕೆಟ್ ಟೂರ್ನಿಯನ್ನು 2022ಕ್ಕೆ ಮುಂದೂದಲಾಗಿದೆ. ಹಾಗೆಯೆ 2021ರ ಟಿ-20 ವಿಶ್ವಕಪ್ ಟೂರ್ನಿಯನ್ನು ನಿಗದಿಪಡಿಸಿದಂತೆ ಭಾರತದಲ್ಲೇ ನಡೆಸಲು ICC ತೀರ್ಮಾನಿಸಿದೆ. ಈ ಮೂಲಕ ಮುಂದಿನ ವರ್ಷ ನಡೆಯಲಿರುವ ಟಿ-20 ವಿಶ್ವಕಪ್ನ ಆತಿಥ್ಯ ಭಾರತಕ್ಕೆ ಖಚಿತಪಟ್ಟಿದೆ. * 2021ರಲ್ಲಿ ನ್ಯೂಜಿಲ್ಯಾಂಡ್ನಲ್ಲಿ ನಡೆಯಬೇಕಿದ್ದ ಐಸಿಸಿ ಮಹಿಳಾ ಕ್ರಿಕೆಟ್ ವಿಶ್ವಕಪ್ ಟೂರ್ನಿಯು 2022ಕ್ಕೆ ಮುಂದೂಡಿಕೆಯಾಗಿದೆ ಅಂತ ಇಂಟರ್ನ್ಯಾಷನಲ್ ಕ್ರಿಕೆಟ್ ಕೌನ್ಸಿಲ್ ತಿಳಿಸಿದೆ.