Job Description: ಕಠ್ಮಂಡು: ಇತ್ತೀಚಿಗೆ ಕೇಂದ್ರ ವಿದೇಶಾಂಗ ಸಚಿವ ಎಸ್. ಜೈಶಂಕರ್ ತಾವು ಪಾಲ್ಗೊಂಡಿದ್ದ ವೆಬಿನಾರ್ ಕಾರ್ಯಕ್ರಮವೊಂದರಲ್ಲಿ ಗೌತಮ ಬುದ್ಧ ಮತ್ತು ಮಹಾತ್ಮ ಗಾಂಧಿ ಇಬ್ಬರು 'ಶ್ರೇಷ್ಠ ಭಾರತೀಯರು' ಎಂಬ ಹೇಳಿಕೆ ನೀಡಿದ್ದರು. ಇದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ನೇಪಾಳವು ಬುದ್ಧ ನೇಪಾಳದಲ್ಲಿ ಜನಿಸಿರುವದಕ್ಕೆ ಪುರಾವೆಗಳಿವೆ ಎಂದು ವಾದ ಮಂಡಿಸಿತ್ತು. ನೇಪಾಳದ ಆಕ್ಷೇಪಕ್ಕೆ ಪ್ರತಿಕ್ರಿಯಿಸಿದ ಭಾರತದ ವಿದೇಶಾಂಗ ಸಚಿವಾಲಯದ ವಕ್ತಾರ ಅನುರಾಗ್ ಶ್ರೀವಾಸ್ತವ್ ಅವರು, ಗೌತಮ ಬುದ್ಧ ನೇಪಾಳದ ಲುಂಬಿನಿಯಲ್ಲಿ ಜನಿಸಿದ್ದು ಎಂಬುದರ ಬಗ್ಗೆ ಯಾವುದೇ ಸಂದೇಹವಿಲ್ಲ ಎಂದು ವಿವಾದಕ್ಕೆ ತೆರೆ ಎಳೆದಿದ್ದಾರೆ.